Saturday, December 4, 2021
spot_img
Homeರಾಜ್ಯಮೋದಿ ಕಾರ್ಯವನ್ನು ಹೊಗಳಿದ ಸಿದ್ದರಾಮಯ್ಯ

ಮೋದಿ ಕಾರ್ಯವನ್ನು ಹೊಗಳಿದ ಸಿದ್ದರಾಮಯ್ಯ

ಬೆಂಗಳೂರು ಮಂಗಳವಾರ  ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್‌ ವರೆಗೆ ವಿಸ್ತರಿಸುವ ನಿರ್ಧಾರವನ್ನು ಘೋಷಿಸಿದರು.

ಇದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೆಚ್ಚಿಕೊಂಡು ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಜತೆಗೆ ಮೋದಿ ವಿರುದ್ಧ ಕಿಡಿಕಾರಲು ಮರೆತಲಿಲ್ಲ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್  ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

“ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು.”

— Siddaramaiah (@siddaramaiah) 

ಮೋದಿ ಭಾಷಣಕ್ಕೆ ಕಿಡಿಕಾರಿದ ಸಿದ್ದು
ಬಡವರಿಗೆ ಉಚಿತ ಆಹಾರ ಧಾನ್ಯ ಘೋಷಣೆ ಮಾಡಿರುವುದನ್ನು ಸ್ವಾಗತಿಸಿದ, ಸಿದ್ದರಾಮಯ್ಯ ಉನ್ನುಳಿದಂತೆ ಮೋದಿ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರನಾ ಸೋಂಕಿನಿಂದ ತತ್ತರಿಸಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಠ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು ಎಂದು ಜರೆದಿದ್ದಾರೆ.

ಆಸ್ಪತ್ರೆಗಳು ತುಂಬಿಹೋಗಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್‌ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದಾರೆ.

ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ‌ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ.ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ‌‌ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಪ್ರಧಾನಿಯನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ನರೇಂದ್ರ ಮೋದಿ, ಅದರ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು ಎಂದಿದ್ದಾರೆ.

“ಪಿಎಂ ಕೇರ್ಸ್  ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಮೋದಿ
ಅದರ ಖರ್ಚುವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ.ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು.”

— Siddaramaiah (@siddaramaiah) 

ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರಧಾನ್ಯ,ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ತೈಲಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಮೋದಿ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು ಎಂದು ಟಾಂಗ್ ಕೊಟ್ಟಿದ್ದಾರೆ.

ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರಧಾನ್ಯ,ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ.

ಈ ತೈಲಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ  ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!