ಕಾರ್ಕಳ : ವಿಶ್ವ ವೈದ್ಯರ ದಿನಾಚರಣೆಯಂಗವಾಗಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ವತಿಯಿಂದ ತಾಲೂಕು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ, ಕೋವಿಡ್-19 ಇದರ ನೋಡಲ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ. ಅವರನ್ನು ಸನ್ಮಾನಿಸಲಾಯಿತು. ಡಾ. ಆಶಾ ಪಿ. ಹೆಗ್ಡೆ, ರೋಟರಿಯ ಡಾ. ಭರತೇಶ್ ಆದಿರಾಜ್, ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಜಗದೀಶ್ ಟಿ., ಮಾಜಿ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ್ ಬಲ್ಲಾಳ್, ರೋಟರಿ ರಾಕ್ ಸಿಟಿ ಅಧ್ಯಕ್ಷ ಸುರೇಂದ್ರ ನಾಯಕ್, ನಿಯೋಜಿತ ಅಧ್ಯಕ್ಷ ಪ್ರಶಾಂತ ಬಿಳಿರಾಯ ಕಾರ್ಯದರ್ಶಿ ಸುರೇಶ್ ನಾಯಕ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದದ್ದರು.
![]() |