Saturday, December 4, 2021
spot_img
Homeರಾಜ್ಯನಾಳೆ ಸಾರಿಗೆ ನಿಗಮ ನೌಕರರ ಪ್ರತಿಭಟನೆ

ನಾಳೆ ಸಾರಿಗೆ ನಿಗಮ ನೌಕರರ ಪ್ರತಿಭಟನೆ

ಬೆಂಗಳೂರು:  ರಾಜ್ಯ ಸರ್ಕಾರದಿಂದ ಪ್ರತಿಯೊಂದು ಸಾರಿಗೆ ನಿಗಮಕ್ಕೆ ಕನಿಷ್ಟ 500 ಕೋಟಿ ರೂ. ಗಳ ಸಂಕಷ್ಟ ಪರಿಹಾರ ಪ್ಯಾಕೇಜನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು‌ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ.

ಕಚ್ಚಾ ತೈಲ ಬೆಲೆ ವಿಪರೀತವಾಗಿ ಕುಸಿದಿದೆ. ಆದರೆ ಕಳೆದ ಹದಿನೈದು ದಿನಗಳಲ್ಲಿ ಲೀಟರ್ ಡೀಸೆಲ್ ಬೆಲೆ 11 ರೂ.ಗಳಷ್ಟು ಹೆಚ್ಚಳವಾಗಿದೆ. ಇದರಿಂದ ಸಾರಿಗೆ ನಿಗಮಗಳು ನಷ್ಟಕ್ಕೆ ಒಳಗಾಗಲಿವೆ.

ಆದ್ದರಿಂದ ಅಂತಾರಾಷ್ಟ್ರೀಯ ಬೆಲೆ ಕುಸಿತದ ಲಾಭವನ್ನು ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ವರ್ಗಾವಣೆ ಮಾಡಬೇಕು. ಡೀಸೆಲ್ ಮೇಲಿನ ತೆರಿಗೆಯನ್ನು ರದ್ದು ಮಾಡಿ ರಿಯಾಯಿತಿ ದರದಲ್ಲಿ ನಿಗಮಗಳಿಗೆ ಡೀಸೆಲ್ ಒದಗಿಸಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ‌‌ ಮುಂದಿಟ್ಟಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೊರೊನಾ ವಿರುದ್ಧ ಸೆಣಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ರೂ.50 ಲಕ್ಷ ವಿಮೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ರೀತಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಕಡ್ಡಾಯವಾಗಿ ರೂ.50 ಲಕ್ಷ ವಿಮ ಖಾತೆಯನ್ನು ಒದಗಿಸಬೇಕು.

ಎಲ್ಲಾ ಸಾರಿಗೆ ಸಿಬ್ಬಂದಿಗೆ, ವಿಶೇಷವಾಗಿ ಚಾಲಕರು, ನಿರ್ವಾಹಕರು, ತಾಂತ್ರಿಕ ಮತ್ತು ಆಡಳಿತ ಸಿಬ್ಬಂದಿಗೆ ಅತ್ಯುತ್ತಮ ಗುಣಮಟ್ಟದ ಆರೋಗ್ಯ ಸುರಕ್ಷತಾ ಉಪಕರಣಗಳು, ಸ್ಯಾನಿಟೈಸರ್‌, ಮುಖಗವಸು, ಕೈಗವಸು ಇತ್ಯಾದಿಗಳನ್ನು ಕಡ್ಡಾಯವಾಗಿ ಒದಗಿಸಬೇಕು.

ಕರ್ತವ್ಯಕ್ಕೆ ಹಾಜರಾಗುತ್ತಿರುವ ಕಾರ್ಮಿಕರಿಗೆ ಸರಿಯಾದ ವೈಯಕ್ತಿಕ ರಕ್ಷಣಾ ಸಲಕರಣೆಗಳು ಲಭ್ಯವಾಗುತ್ತಿಲ್ಲ. ಸರಿಯಾದ ಶೌಚಾಲಯಗಳು ಮತ್ತು ಮೂಲಭೂತ ಸೌಕರ್ಯಗಳು ಕೊರತೆಯಿದೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರ ಜೀವ ಮತ್ತು ಜೀವಗಳ ಸಂಪೂರ್ಣ ರಕ್ಷಣೆ ಹೊಣೆಯನ್ನು ಸರ್ಕಾರ ಹೊರಬೇಕು.

ರಾಜ್ಯ ಸಾರಿಗೆ ನಿಗಮಗಳ ವಾಹನಗಳ ತೆರಿಗೆಯನ್ನು ಸಂಪೂರ್ಣ ರದ್ದು ಮಾಡಬೇಕು. ಸಾರಿಗೆ ನಿಗಮದ ಬಸ್ಸುಗಳು ಟೋಲ್ ಫ್ರೀ ವ್ಯವಸ್ಥೆ ಜಾರಿ ಮಾಡಬೇಕು. ಸಾರಿಗೆ ನಿಗಮಗಳಿಗೆ ಸರ್ಕಾರ ನೀಡಬೇಕಿರುವ ವಿವಿಧ ಬಸ್‌ಪಾಸ್‌ಗಳ ಬಾಕಿ ಹಣವನ್ನು ಸಂಪೂರ್ಣ ವಾಪಸ್ ನೀಡಬೇಕು.

ಸಾರಿಗೆ ನಿಗಮಗಳ ಸಿಬ್ಬಂದಿ ಆಕಸ್ಮಾತ್ ಕೊರೊನಾ ಪೀಡಿತರಿಗೆ ಅಂತಹವರ ಕ್ವಾರಂಟೈನ್ ಅವಧಿಯನ್ನು ವೇತನ ಸಹಿತ ರಜೆ ಎಂದು ಪರಿಗಣಿಸಬೇಕು. ಮತ್ತು ಇತರ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು.

ಎಲ್ಲಾ ಕಾರ್ಮಿಕರಿಗೆ ಮೇ ಅಂತ್ಯದವರೆಗೆ ಲಾಕ್‌ಡೌನ್ ಅವಧಿಯ ವೇತನವನ್ನು ಪೂರ್ಣವಾಗಿ ನೀಡಬೇಕು. ಆ ನಂತರದ ಅವಧಿಯಲ್ಲಿ ಕಾರ್ಮಿಕರನ್ನು ಮಾರ್ಗಗಳಿಗೆ ನಿಯೋಜನೆ ಮಾಡಲು ಆಡಳಿತ ವರ್ಗಕ್ಕೆ ಸಾಧ್ಯವಾಗದಿದ್ದಲ್ಲಿ ಅದರ ಹೊಣೆಗಾರಿಕೆಯನ್ನು ಆಡಳಿತ ವರ್ಗವೇ ಬರಬೇಕು, ರಜೆ ಹಾಕುವಂತೆ ಕಾರ್ಮಿಕರನ್ನು ಒತ್ತಾಯಿಸಬಾರದು, ಪೂರ್ಣ ಪ್ರಮಾಣದ ವೇತನವನ್ನು ನೀಡಬೇಕು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!