ಹಾಸ್ಯ ನಟ ರಾಜ ಗೋಪಾಲ್ ನಿಧನ

650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಕಲಾವಿದ

ಬೆಂಗಳೂರು : ಕನ್ನಡದ ಹಾಸ್ಯ ಕಲಾವಿದ ರಾಜ ಗೋಪಾಲ್ ನಿಧನರಾಗಿದ್ದಾರೆ. ಅಸ್ತಮ ಮತ್ತು ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದ  ರಾಜ ಗೋಪಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು.

ನಿನ್ನೆ ರಾತ್ರಿ 1ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದ ರಾಜ್ ಗೋಪಾಲ್ ಕೆಂಗೇರಿ ಬಳಿಯ ವಲಗರ ಹಳ್ಳಿಯಲ್ಲಿ ಬಿಡಿಎ ನಿರ್ಮಿಸಿರೋ ವಸತಿ ಸಮುಚ್ಚಯದಲ್ಲಿ ವಾಸವಿದ್ದರು. ರಾಜ್ ಗೋಪಾಲ್‌ಗೆ ಮೂರು ಜನ ಹೆಣ್ಣುಮಕ್ಕಳಿದ್ದಾರೆ.

ಕನ್ನಡ ತಮಿಳು ಸೇರಿದಂತೆ 650 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫೇಮಸ್ ಅರ್ಕೆಸ್ಟ್ರಾಗಳಲ್ಲಿ ಮಿಮಿಕ್ರಿ ಮಾಡಿ ಹೆಸರು ಮಾಡಿದ್ದ ರಾಜ್ ಗೋಪಾಲ್ ವಿಷ್ಣುವರ್ಧನ್, ಅಂಬರೀಶ್, ಪ್ರಭಾಕರ್ ಹೀಗೆ ಕನ್ನಡ ಮೇರು ನಟರ ಜೊತೆ ಅಭಿನಯಿಸಿದ್ದರು.

ಸಾಯಿ ಪ್ರಕಾಶ್ ನಿರ್ದೇಶನದ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಇವರು, ಕೆಲ ವರ್ಷಗಳ ಹಿಂದಿನಿಂದ ಸಿನಿಮಾ ಅವಕಾಶ ಇಲ್ಲದೆ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದರು.

Latest Articles

error: Content is protected !!