Homeರಾಜ್ಯಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ?

Related Posts

ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯುವ ಸಾದ್ಯತೆ ಇದೆ. ಏಕೆಂದರೆ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಲ್ಲಿಸಿದ ಪ್ರಮಾಪತ್ರದಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.

 ಸರಕಾರ ಗ್ರಾ.ಪಂ. ಚುನಾವಣೆಯನ್ನು ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನ್ಯಾಯಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿತ್ತು. ಈ ವೇಳೆ ಚುನಾವಣಾ ಆಯೋಗದ ವತಿಯಿಂದ ಪಂಚಾಯಿತಿ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ಜುಲೈ 25ಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ಮೀಸಲಾತಿ ನೋಟಿಫಿಕೇಶನ್ ಕಾರ್ಯ ಮುಕ್ತಾಯವಾಗಲಿದೆ. ಸೆಪ್ಟೆಂಬರ್ ವೇಳೆಗೆ ಮತದಾರರ ಅಂತಿಮ ಪಟ್ಟಿ ಸಿದ್ಧವಾಗಲಿದ್ದು, ಇದಾದ ನಂತರ 5800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಮಾಡಲಾಗುವುದು. ಕೊರೊನಾ ಪರಿಸ್ಥಿತಿ ಆಧರಿಸಿ ಅಕ್ಟೋಬರ್ ಮೊದಲ ವಾರದ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ವತಿಯಿಂದ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

 

LEAVE A REPLY

Please enter your comment!
Please enter your name here

Latest Posts

error: Content is protected !!