ಕಾರ್ಕಳ : ರೋಟರಿ ಆ್ಯನ್ಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪ್ಪಾಡಿ-ನಲ್ಲೂರುವಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ಮಾಸಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಕಾರ್ಕಳ ಗ್ರಾಮಾಂತರ ಠಾಣೆ ಹೆಡ್ ಕಾನ್‌ಸ್ಟೇಬಲ್ ನಾಗೇಶ್ ನಾಯಕ್, ಮಾದಕ ವಸ್ತುಗಳ ಗೀಳು ಅಂಟಿಸಿಕೊಂಡು ಯುವ ಸಮುದಾಯ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳಬಾರದು. ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವವಾದುದು ಎಂದರು. ರೋಟರಿ ಸಂಸ್ಥೆ ಕಾರ್ಕಳದ ಅಧ್ಯಕ್ಷೆ ರೇಖಾ ಉಪಾಧ್ಯಾಯ, ಆ್ಯನ್ಸ್ ಸಂಸ್ಥೆಯ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್, ಕಾರ್ಯದರ್ಶಿ ಸುಮಾ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಸದಸ್ಯರಾದ ಶೈಲೇಂದ್ರ ರಾವ್, ಇಕ್ಬಾಲ್ ಅಹ್ಮದ್, ಬಾಲಕೃಷ್ಣ ದೇವಾಡಿಗ, ಅಮರನಾಥ್ ಪ್ರಸಾದ್, ಜ್ಯೋತಿ ಸುನಿಲ್ ಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. ಪರಪ್ಪಾಡಿ ಶಾಲಾ ಮುಖ್ಯಶಿಕ್ಷಕಿ ಪೂರ್ಣಿಮಾ ಶೆಣೈ ಸ್ವಾಗತಿಸಿ, ಶಶಿಕಲಾ ಕೆ. ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
.