ಕಾರ್ಕಳ : ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ರೋಟರಿ ಆ್ಯನ್ಸ್ ಕ್ಲಬ್, ರೋಟರಿ ಸಂಸ್ಥೆ ಕಾರ್ಕಳ ಸಹಯೋಗದೊಂದಿಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕರಪತ್ರ ಬಿಡುಗಡೆಗೊಳಿಸಲಾಯಿತು. ಡಿವೈಎಸ್‌ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ನಗರ ಪೊಲೀಸ್ ಠಾಣೆ ಎಸ್‌ಐ ಮಧು ಬಿ.ಇ., ರೋಟರಿ ಕ್ಲಬ್ ಅಧ್ಯಕ್ಷೆ ರೇಖಾ ಉಪಾಧ್ಯಾಯ, ಕಾರ್ಯದರ್ಶಿ ಶಶಿಕಲಾ ಕೆ. ಹೆಗ್ಡೆ, ಆ್ಯನ್ಸ್ ಸಂಸ್ಥೆಯ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್, ಕಾರ್ಯದರ್ಶಿ ಸುಮಾ ನಾಯಕ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ನಾಸಿರ್ ಹುಸೇನ್ ಸ್ವಾಗತಿಸಿ, ರೋಟರಿ ಸದಸ್ಯ ಇಕ್ಬಾಲ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿ, ನಿರಂಜನ್ ಜೈನ್ ವಂದಿಸಿದರು.