ಪಾಕಿಸ್ತಾನದ ಹಿಂದೂ ನಿರಾಶ್ರಿತರಿಗೆ ಕ್ರಿಕೆಟಿಗ ಶಿಖರ್ ಧವನ್ ನೆರವು

ದಿಲ್ಲಿ: ಪಾಕಿಸ್ಥಾನದಿಂದ ವಲಸೆ ಬಂದು ದಿಲ್ಲಿಯ ನಿರಾಶ್ರಿತ ಶಬಿರಗಳಲ್ಲಿ ಆಶ್ರಯ ಪಡೆದಿರುವ ಹಿಂದೂ ನಿರಾಶ್ರಿತರಿಗೆ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಕ್ರಿಕೆಟ್ ಬ್ಯಾಟ್ ಮತ್ತು ಮತ್ತಿತರ ಜೀವನ ಅವಶ್ಯಕ ಸಹಾಯಕ ಒದಗಿಸುವ ಮೂಲಕ ಸಹಾಯ ಮಾಡಿದ್ದಾರೆ.

ದಿಲ್ಲಿಯಲ್ಲಿ ನೆಲೆಸಿರುವ ನಿರಾಶ್ರಿತರಿಗೆ ಲಾಕ್ ಡೌನ್ ಸಮಯದಲ್ಲಿ ಜೀವನ ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಧವನ್ ನನಗೆ ಈ ನಿರಾಶ್ರಿತರಿಗೆ ಸಹಾಯ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

error: Content is protected !!
Scroll to Top