ಲಡಾಕ್‌ ಬಿಕ್ಕಟ್ಟು – ರಾಷ್ಟ್ರಪತಿಗೆ ಮಾಹಿತಿ ನೀಡಿದ ಮೋದಿ

ದಿಲ್ಲಿ: ಭಾರತ-ಚೀನಾ ಸಂಘರ್ಷ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಲಡಾಖ್ ಗೆ ಭೇಟಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದರು. ಭೇಟಿಯ ಸಂದರ್ಭದಲ್ಲಿ ಭಾರತ-ಚೀನಾ ಗಡಿ ಸಂಘರ್ಷದ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲಡಾಕ್‌ ಗೆ ಭೇಟಿ ನೀಡಿ ಗಡಿ ಪಡೆಯ ಸೇನಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.







































error: Content is protected !!
Scroll to Top