ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ- ತನಿಖೆ ಹೊಣೆ ಸಿಐಡಿಗೆ

ಬೆಂಗಳೂರು : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ  ಬೆಂಗಳೂರಿನ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ವಾಸುದೇವ ಮಯ್ಯ (73) ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಮಾಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ವಾಸುದೇವ ಮಯ್ಯ ಅವರ ಪುತ್ರಿ ರಶ್ಮಿ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಸಾಲ ಪಡೆದಿರುವ ನನ್ನ ತಂದೆಗೆ ವಿಪರೀತ ಕಿರುಕುಳ ನೀಡುತ್ತಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಾಯಿತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಸ್ತುತ ಸಿಇಒ ವಿರುದ್ಧ  ದೂರು

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಸ್ತುತ ಸಿಇಒ ಸಂತೋಷ್ ಕುಮಾರ್, ರವಿ ಐತಾಳ, ರಾಕೇಶ್, ಶ್ರೀಪಾದ್ ಹೆಗಡೆ, ಪ್ರಶಾಂತ್ ಹಾಗೂ ಬ್ಯಾಂಕಿನ ಇತರ ಆರು ಜನರ ವಿರುದ್ಧ ದೂರು ದಾಖಲಾಗಿದೆ.
ಡೆತ್ ನೋಟ್ ಪರಿಗಣಿಸಿ ‘ನಮ್ಮ ತಂದೆಯವರಿಗೆ ಬ್ಯಾಂಕಿನ ವಹಿವಾಟಿನ ಬಗ್ಗೆ ಹೆಚ್ಚಿನ ತಿಳಿವಳಿಕೆ ಇರಲಿಲ್ಲ. ಅವರು ತಮ್ಮ ಕಂಪ್ಯೂಟರ್ ಪಾಸ್‌ವರ್ಡ್ ನ್ನು ಸಹೋದ್ಯೋಗಿಗಳಿಗೆ ನೀಡಿದ್ದರು. ನಮ್ಮ ತಂದೆ ಮಾಡದ ತಪ್ಪಿಗೆ ಅವರನ್ನು ಹೊಣೆ ಮಾಡಲಾಗಿದೆ. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಾಯಿತು. ಡೆತ್ ನೋಟ್ ಪರಿಗಣಿಸಿ ಹನ್ನೊಂದು ಜನ ಆರೋಪಿಗಳ ವಿರುದ್ಧ ಕ್ರಮ   ಬಹುಕೋಟಿ ಹಗರಣಕ್ಕೆ ಕಾರಣವಾಗಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ವಾಸುದೇವ ಮಯ್ಯ ಜುಲೈ 6 ರಂದು ಪೂರ್ಣಪ್ರಜ್ಞಾ ಲೇಔಟ್ ನಲ್ಲಿ ಇರುವ ಮನೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ನಲ್ಲಿ 1800 ಕೋಟಿ ರುಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು. ಈ ಹಗರಣದಲ್ಲಿ ವಾಸುದೇವ ಮಯ್ಯ ಪ್ರಮುಖ ಆರೋಪಿ ಕೂಡ ಆಗಿದ್ದರು. ಕಳೆದ ತಿಂಗಳು ಮಯ್ಯ ಅವರ ಮನೆ ಮೇಲೆ ಎಸಿಬಿ ದಾಳಿ ಕೂಡ ನಡೆದಿತ್ತು. ಈಚೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.
ಡೆತ್ ನೋಟ್ ನಲ್ಲೇನಿದೆ?  

ಆತ್ಮಹತ್ಯೆಗೂ ಮುನ್ನ ಮಯ್ಯ ಅವರು ಡೆತ್ ನೋಟ್ ಬರೆದಿಟ್ಟಿದ್ದರು ಎನ್ನಲಾಗಿದ್ದು, ಅದು ಬಹಿರಂಗಗೊಂಡಿದೆ. ಆರು ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಎಂಟು ಜನರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಬ್ಯಾಂಕಿನ ಅವ್ಯವಹಾರವನ್ನು ಪ್ರಸ್ತಾಪಿಸಿರುವ ಮಯ್ಯ ಅವರು ಬ್ಯಾಂಕಿನ ಅವ್ಯವಹಾರಕ್ಕೆ ನಾನೊಬ್ಬನೇ ಕಾರಣನಲ್ಲ, ಬೇರೆಯವರ ಪಾತ್ರವೂ ಇದೆ. ಅಪವಾದ ಮಾತ್ರ ನನ್ನ ಮೇಲೆ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಸದ್ಯ ಪೊಲೀಸರು ಆ ಜನರ ಹೆಸರನ್ನು ತನಿಖಾ ದೃಷ್ಠಿಯಿಂದ ಬಯಲು ಮಾಡಿಲ್ಲ ಎನ್ನಲಾಗಿದೆ.














































































































































































error: Content is protected !!
Scroll to Top