ಗಾಂಧಿನಗರ: ಪಟೀದಾರ್ ಸಮುದಾಯದ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದ ಯುವ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಹಾರ್ದಿಕ್ ಪಟೇಲ್ ಅವರ ನೇಮಕಕ್ಕೆ ಅಂಕಿತದ ಮುದ್ರೆ ಒತ್ತಿರುವ ಕಾಂಗ್ರೆಸ್ ಹೈಕಮಾಂಡ್, ಈ ಮೂಲಕ ಗುಜರಾತ್‌ನಲ್ಲಿ ಕಳೆಗುಂದಿರುವ ಪಕ್ಷದ ವರ್ಚಸ್ಸು ವೃದ್ಧಿಸಲು ಮುಂದಡಿ ಇಟ್ಟಿದೆ.
ಯುವ ನಾಯಕರಾಗಿರುವ ಹಾರ್ದಿಕ್ ಪಟೇಲ್, ಪಟೇಲ್ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ನಿರಂತರ ಹೋರಾಟ ನಡೆಸುವ ಮೂಲಕ ಇಡೀ ದೇಶದ ಗಮನ ಸೆಳೆದವರು. ಹೀಗಾಗಿ ಹಾರ್ದಿಕ್ ಪಟೇಲ್‌ಗೆ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವುದು ಹೈಕಮಾಂಡ್ ಇರಾದೆಯಾಗಿದೆ.ಬಿಜೆಪಿ ಉತ್ತು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯ ಕಟು ಟೀಕಾಕಾರರು ಹಾರ್ದಿಕ್ ಪಟೇಲ್. ಈ ಒಂದು ಅಂಶವೂ ಅವರ ನೇಮಕಾತಿಯಲ್ಲಿ ಮುಖ್ಯ ಪಾತ್ರ ವಹಿಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಟೇಲ್ ಆವರಿಗೆ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷನ ಹೊಣೆ ಹೊರಿಸವ ಮೂಲಕ ಗಜರಾತಿನಲ್ಲಿ ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಲು ಹೈಕಮಾಂಡ್ ಮುಂದಾಗಿದೆ.