ರಾಜ್ಯದಲ್ಲಿ ತಯಾರಾಗಲಿದೆ ಪಿಪಿಇ ಕಿಟ್

0

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇದಿನೆ ವ್ಯಾಪಕವಾಗಿ ಹರಡುತ್ತಲೇ ಇದೆ. ಈ ನಡುವೆ ಸೋಂಕಿತರ ಚಿಕಿತ್ಸೆನೀಡುವ ವೈದ್ಯರು ಹಾಗೂ ಇತರ ಸಿಬಂದಿಗಳು ಧರಿಸುವ  ಪಿಪಿಇ ಕಿಟ್‌ಗಳ ಕೊರತೆಯೂ ಎದುರಾಗುವ ಸಾಧ್ಯತೆ ಇದ್ದು, ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪಿಪಿಇ ಕಿಟ್ ತಯಾರಿಕಾ ಕಾರ್ಖಾನೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಬಳಿಕ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ವೈದ್ಯಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ಪೂರಕವಾದ ಪರಿಕರಗಳ ಕಾರ್ಖಾನೆಗಳನ್ನು ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಪ್ರಸ್ತಾಪ ಸಲ್ಲಿಸಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಭರವಸೆಯನ್ನೂ ಅಶೋಕ್ ನೀಡಿದ್ದಾರೆ.

ರಾಜ್ಯದಲ್ಲಿ 12 ಜಿಲ್ಲೆಗಳಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಲಾಕ್ಡೌನ್, ನಿಯಂತ್ರಣ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಸರ್ಕಾರದ ಎಲ್ಲಾ ಸಲಹೆ ಸೂಚನೆಗಳನ್ನು ಪರಿಪಾಲಿಸುವ ಮೂಲಕವೇ ಜನರು ಕೊರೋನಾದಿಂದ ತಪ್ಪಿಸಿಕೊಳ್ಳುವಂತೆಯೂ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

Previous articleಪಿಟಿಐಗೆ 84 ಕೋಟಿ ರೂ. ದಂಡ
Next articleಬೆಂಗಳೂರು ಲಾಕ್‌ಡೌನ್ – ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

LEAVE A REPLY

Please enter your comment!
Please enter your name here