ಬೆಂಗಳೂರು: ಜುಲೈ 14ರಂದು ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಣೆ ಮಾಡಿದ್ದಾರೆ.
ಮಂಗಳವಾರ ಬೆಳಿಗ್ಗೆ 11.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶ ಬರಲಿದೆ. 12 ಗಂಟೆಗೆ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು.
http://www.karresults.nic.in ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ.
ಕೊರೋನಾ ವೈರಸ್ ಕಾರಣದಿಂದ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿತ್ತು. ಇದೀಗ ಮೌಲ್ಯಮಾಪನ ಯಶಸ್ವಿಯಾಗಿ ನಡೆದಿದ್ದು, ಫಲಿತಾಂಶ ನಾಳೆ ಪ್ರಕಟವಾಗಲಿದೆ.