ಬುಧವಾರ ಸಿಬಿಎಸ್‍ ಇ 10ನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು.

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು. ‘ನನ್ನ ಪ್ರೀತಿಯ ಮಕ್ಕಳು, ಪೋಷಕರು ಮತ್ತು ಶಿಕ್ಷಕರೇ, ಸಿಬಿಎಸ್‌ಇ ಮಂಡಳಿಯ 10ನೇ ತರಗತಿ ಪರೀಕ್ಷಾ ಫಲಿತಾಂಶಗಳನ್ನು ನಾಳೆ ಪ್ರಕಟಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳ ಯಶಸ್ಸನ್ನು ನಾನು ಬಯಸುತ್ತೇನೆ.’ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ‘ನಿಶಾಂಕ್’ ಟ್ವೀಟ್‍ ಮಾಡಿದ್ದಾರೆ. 

ಇಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಗಳವಾರ ಬೆಳಿಗ್ಗೆಯಿಂದಲೇ ಕೆಲ ಚಾನೆಲ್‌ಗಳಲ್ಲಿ ಸುದ್ದಿ ಹರಿದಾಡಲು ಆರಂಭಿಸುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಆತಂಕವನ್ನುಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸ್ಪಷ್ಟನೆ ನೀಡಿದ್ದಾರೆ. 

ಮಂಡಳಿಯ 10ನೇ ತರಗತಿ ಫಲಿತಾಂಶಗಳನ್ನು ಇಂದು ಪ್ರಕಟಿಸುವುದಿಲ್ಲ ಎಂದು ಸಿಬಿಎಸ್‌ಇ ಪ್ರಧಾನ ಕಚೇರಿಯು ಮೊದಲ ಟ್ವೀಟ್‌ನಲ್ಲಿ ಹೇಳಿತ್ತು. ಇದರ ನಂತರ, ಡಾ. ಪೋಖ್ರಿಯಾಲ್ ಅವರು ಟ್ವೀಟ್ ಮಾಡಿ ನಾಳೆ ಫಲಿತಾಂಶಗಳು ಹೊರಬೀಳಲಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಮಂಡಳಿಯು ನಿನ್ನೆ 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿತ್ತು. ನಂತರ ಮಂಡಳಿಯ 10ನೇ ತರಗತಿಫಲಿತಾಂಶಗಳ ಬಗ್ಗೆ ಹೆಚ್ಚಿನ ಕುತೂಹಲವಿತ್ತು.error: Content is protected !!
Scroll to Top