ಕೊರೊನಾ ಚಿಕಿತ್ಸೆಗೆ ಸಜ್ಜಾಗದ ಖಾಸಗಿ ಆಸ್ಪತ್ರೆಗಳಿಗೆ ಖಡಕ್‌ ವಾರ್ನಿಂಗ್‌

0

ನಾಲ್ಕು  ತಿಂಗಳ ಹಿಂದೆಯೇ ಸ್ಪಷ್ಟ ಅದೇಶಗಳನ್ನು ನೀಡಿದ್ದರೂ ಇದುವರೆಗೆ ಕೋವಿಡ್ ಎದುರಿಸಲು ಸಜ್ಜಾಗದ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವಿರುದ್ಧ  ಕ್ರಿಮಿನಲ್ ಕೇಸ್ ದಾಖಲಿಸಿ ಅನುಮತಿ ರದ್ದು ಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ಬೆಂಗಳೂರು: ಕೊರೊನಾ ಎದುರಿಸಲು ಸಜ್ಜಾಗದ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವಿರುದ್ಧ  ಕ್ರಿಮಿನಲ್ ಕೇಸ್ ದಾಖಲಿಸಿ ಅನುಮತಿ ರದ್ದು ಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿಂದು ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಇದುವರೆಗೆ ಕೋವಿಡ್ ಲ್ಯಾಬ್ ಸ್ಥಾಪಿಸದ, ಹಾಸಿಗೆಗಳನ್ನು ಮೀಸಲಿಡದ, ಚಿಕಿತ್ಸೆ ನಿರಾಕರಿಸುತ್ತಿರುವ ಮತ್ತು ಅಗತ್ಯ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸದ ಖಾಸಗಿ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆದೇಶಿಸಿದ್ದಾರೆ ಎಂದು ತಿಳಿಸಿದರು.

ನಾಲ್ಕು  ತಿಂಗಳ ಹಿಂದೆಯೇ ಸ್ಪಷ್ಟ ಅದೇಶಗಳನ್ನು ನೀಡಿದ್ದರೂ ಇದುವರೆಗೆ ಸಾರ್ವಜನಿಕರ ರಕ್ಷಣೆಯ ವಿಚಾರದಲ್ಲಿ ಇಂತಹ ವೈಫಲ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. 

Previous articleಕೊರೊನಾ ಪರಿಶೀಲನೆ ತಂಡ ರಚಿಸಲು 4 ಗಂಟೆಗಳ ಗಡುವು
Next articleಪಿಯುಸಿ ಫಲಿತಾಂಶ -ಉಡುಪಿ, ದಕ್ಷಿಣ ಕನ್ನಡ ಪ್ರಥಮ, ವಿಜಯಪುರಕ್ಕೆ ಕೊನೆಯ ಸ್ಥಾನ

LEAVE A REPLY

Please enter your comment!
Please enter your name here