ಮಾದಕ ವಸ್ತು ಸೇವಿಸಿದ ಗ್ಯಾಂಗ್ ನ ಕೃತ್ಯ ಎಂದು ಸ್ಥಳೀಯರ ಆರೋಪ
ಮಂಗಳೂರು: ನಗರದ ಬಜಿಲಕೇರಿಯಲ್ಲಿ ಸೋಮವಾರ ತಡರಾತ್ರಿ ಮಾರಕಾಯುಧಗಳನ್ನು ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ
ಮಾರಕ ಆಯುಧ ಹೊಂದಿದ್ದ ಗ್ಯಾಂಗ್ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದೆ. ಕ್ಷುಲ್ಲಕ ಕಾರಣಗಳಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ.
ಗಾಯಗೊಂಡ ಮೂವರು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಗ್ಯಾಂಗ್ ಕೃತ್ಯ ನಡೆಸಿದ್ದ ಸ್ಥಳದಲ್ಲಿನ ಮನೆ ಮುಂದಿನ ವಸ್ತುಗಳನ್ನು ಹಾನಿಗೊಳಿಸಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿಯಿತ್ತು ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಪ್ರದೇಶದಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ನಡುವೆ ಹಳೆ ದ್ವೇಷದ ಹಿನ್ನೆಲೆ ಗಾಂಜಾ ಸೇವಿಸಿದ್ದ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.