ದಿಲ್ಲಿ : ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾರಕ ಸೋಂಕು ಹಿಂದಿನ ದಾಖಲೆಗಳನ್ನು ಮೀರಿದ್ದು, ಇನ್ನಷ್ಟು ಭೀತಿ ತಂದೊಡ್ಡಿದೆ. ಒಂದೇ ದಿನದಲ್ಲಿ 38,902 ಮಂದಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದ್ದು, ಡೆಡ್ಲಿ ಸೋಂಕಿಗೆ ನಿನ್ನೆ ಒಂದೇ ದಿನ 543 ಮಂದಿ ಬಲಿಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,902 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮಾರಣಾಂತಿಕ ಸೋಂಕಿಗೆ ತುತ್ತಾಗಿದ್ದ 543 ಮಂದಿ ಮೃತಪಟ್ಟಿದ್ದಾರೆ. ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,77,618 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 6,77,423 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 3,73,379 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈವರೆಗೆ ದೇಶದಲ್ಲಿ ಕಿಲ್ಲರ್ ಸೋಂಕಿಗೆ ಬಲಿಯಾದವರ ಸಂಖ್ಯೆ 26,816ಕ್ಕೆ ಏರಿಕೆಯಾಗಿದೆ.