ಗಣ್ಯರೂ ಸೇರಿದಂತೆ ಸಾಮಾಜಿಕ ಅಂತರ ಪಾಲಿಸದೆ ಬೇಕಾಬಿಟ್ಟಿ ವರ್ತಿಸುವ ಎಲ್ಲರ ವಿರುದ್ಧ ಕಠಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ವಿಪತ್ತು ನಿರ್ವಹಣಾ ಕಾಯಿದೆಯಡಿ ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯಗೊಳಿಸಿದ್ದರೂ ಸಚಿವರು ಸೇರಿದಂತೆ ರಾಜಕಾರಣಿಗಳು ಮತ್ತು ಗಣ್ಯರು ಪದೇಪದೆ ಇದನ್ನು ಉಲ್ಲಂಘಿಸುವುದು ಕಂಡು ಬರುತ್ತಿದೆ. ಈ ಹಿನ್ನೆಯಲ್ಲಿ ದಾಖಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ರಾಜಕೀಯ ನಾಯಕರೊಬ್ಬರ ಪುತ್ರನ ವಿವಾಹ,ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಮೆಗೆ ಶಂಕುಸ್ಥಾಪನೆ ಹಾಗೂ ಕೆಲವು ರಾಜಕೀಯ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಪಾಲನೆ ಉಲ್ಲಂಘನೆಯಾಗಿರುವುದನ್ನು ಅರ್ಜಿದಾರರು ನ್ಯಾಯಾಲದ ಗಮನಕ್ಕೆ ತಂದಿದ್ದರು. ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ಈ ಕುರಿತು ತೆಗೆದುಕೊಂಡಿರುವ ಕ್ರಮಗಳನ್ನು ಜು.24 ರೊಳಗೆ ತಿಳಿಸಬೇಕೆಂದು ಸರಕಾರಕ್ಕೆ ಆದೇಶಿಸಿದೆ.