ಕೊರೊನಾ : 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಂವಾದ

ದಿಲ್ಲಿ :ಕೊರೊನಾ ವೈರಸ್‌ ಸೋಂಕಿನ ಸ್ಥಿತಿಗತಿಯನ್ನು ತಿಳಿದುಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದು  ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಸಂಭಾಷಣೆ ನಡೆಸಿದರು. ಈ ಸಮಯದಲ್ಲಿ ಅವರು ರಾಜ್ಯಗಳಲ್ಲಿನ ಕೊರೊನಾ  ಪರಿಸ್ಥಿತಿ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಭರವಸೆ ನೀಡಿದರು.
ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿ ಉತ್ತರಾಖಂಡದಲ್ಲಿ ಕೋವಿಡ್ -19 ನಿಂದ ಬಳಲುತ್ತಿರುವ ಸೈನಿಕರ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಕರೋನಾವೈರಸ್ ಸೋಂಕಿತ ಸೈನಿಕರು ಬೇಗ ಗುಣಮುಖರಾಗುವಂತೆ ಪ್ರಧಾನಿ ಮೋದಿ ಹಾರೈಸಿದರು.
1.65 ಲಕ್ಷ   ಪ್ರಕರಣಗಳು ದಾಖಲಾಗಿರುವ ತಮಿಳುನಾಡಿನಲ್ಲಿ ಸೋಂಕಿನ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಅಂಶಗಳ ಕುರಿತು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ  ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದರು. 
ಕರೋನಾ ವೈರಸ್ ಸೋಂಕು ಅಸ್ಸಾಂನಲ್ಲಿಯೂ ವೇಗವಾಗಿ ಹೆಚ್ಚುತ್ತಿದೆ. ಅಸ್ಸಾಂನಲ್ಲಿನ ಪ್ರವಾಹದಿಂದಾಗಿ ಪರಿಸ್ಥಿತಿ ನಿಯಂತ್ರಿಸಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಪ್ರಧಾನಿ ಮೋದಿ ಅವರು ಪ್ರವಾಹ ಮತ್ತು ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಿದರು. ಅನಿಲ ಬಾವಿಯಲ್ಲಿನ ಬೆಂಕಿಯನ್ನು ನಂದಿಸಲು ಆಯಿಲ್ ಇಂಡಿಯಾ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾಹಿತಿ ಪಡೆದರು.

error: Content is protected !!
Scroll to Top