ಬೆಂಗಳೂರು : ಕೊರೊನಾ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿವೆ. ಇನ್ನೂ ಶಾಲೆಗಳು ಆರಂಭವಾಗಿಲ್ಲ. ಸದ್ಯಕ್ಕೆ ಆಕಂಭವಾಗುತ್ತವೋ ಇಲ್ಲವೋ ಎನ್ನುವುದು ಕೂಡ ಗೊತ್ತಿಲ್ಲ. ಮಕ್ಕಳು, ಪಾಲಕರ ಜೊತೆಗೆ ಶಿಕ್ಷಕರು ಕೂಡ ಯಾವಾಗ ಶಾಲೆಗಳು ಆರ<ಭವಾಗಲಿವೆ ಎಂಬ ಗೊಂದಲದಲ್ಲಿದ್ದಾರೆ. ಈ ನಡುವೆ ಸೆಪ್ಟಂಬರ್ನಲ್ಲಿ ಶಾಲೆಗಳು ಆರಂಝವಾಗಲಿವೆ ಎಂಬ ಮಾಹಿತಿಯೊಂದು ಹರಿದಾಡುತ್ತಿದೆ. ಈ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅವರೇ ಸ್ಪಷ್ಟೀಕರಣ ನೀಡಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಸೂಚನೆಯಂತೆ ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ ಎಂಬ ವರದಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾಗ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವನ್ನು ಈ ರೀತಿ ಪ್ರತಿಬಿಂಬಿಸಲಾಗಿದೆಯಷ್ಟೆ.ಇದು ಸರಕಾರದ ಅಧಿಕೃತ ನಿರ್ಧಾರವಲ್ಲ ಎಂಬುದಾಗಿ ಸುರೇಶ್‌ಕುಮಾರ್ ಹೇಳಿದ್ದಾರೆ.
ಕೋವಿಡ್ ಸಂದರ್ಭದಲ್ಲಿನ ಶಿಕ್ಷಣ ಕ್ಷೇತ್ರದ ಆದ್ಯತೆಗಳು ಬೇರೆಯಿದ್ದು, ಅವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ತನ್ನನ್ನು ತೊಡಗಿಸಿಕೊಂಡಿದೆ.
ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಮುಕ್ತ ವಾತಾವರಣ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ನಾವು ಯಾವುದೇ ಯೋಚನೆ, ನಿರ್ಣಯ ಕೈಗೊಂಡಿಲ್ಲ. ಪೋಷಕರು ಅನಾವಶ್ಯಕ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.