ಉಡುಪಿ : ಕೊರೊನಾ ವೈರಸ್ ಶ್ರೀಕೃಷ್ಣ ಮಠವನ್ನೂ ಪ್ರವೇಶಿಸಿದೆ.ಪುತ್ತಿಗೆ ಮಠದ ಯತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಮಠದ ಮೂಲಗಳು ತಿಳಿಸಿರುವ ಪ್ರಕಾರ ಸದ್ಯ ಸ್ವಾಮೀಜಿಗಳು ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ. ಪುತ್ತಿಗೆ ಶ್ರೀಗಳು 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಆಗಮಿಸಿದ ಶ್ರೀಗಳಿಗೆ ಕೆಲ ದಿನಗಳಿಂದ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಹೀಗಾಗಿ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.