ಬೆಂಗಳೂರು: ಆರೋಗ್ಯ ಹಾಗೂ ವೈದ್ಯಕೀಯ ಇಲಾಖೆಗಳಿಗೆ ಔಷಧಿ, ಉಪಕರಣಗ ಖರೀದಿಗಾಗಿ ಸುಮಾರು 500 ಕೋ. ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಈ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗಾಗಿ 4500 ರೂ. ಶುಲ್ಕ ಪಡೆಯುತ್ತಿತ್ತು ಅದನ್ನು 3 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. 3 ಸಾವಿರ ರೂ.ನಲ್ಲೇ ಎಲ್ಲಾ ಪರೀಕ್ಷೆಗಳು ಆಗಬೇಕು. ಅದನ್ನು ಬಿಟ್ಟು ಪಿಪಿಇ ಕಿಟ್ ಅಂತೆಲ್ಲಾ ಹಣ ಹಾಕಬಾರದು. ಅಂತೆಯೇ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ 2 ಸಾವಿರ ರೂಪಾಯಿ ನಿಗದಿಪಡಿ ಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಕೋವಿಡ್-19 ನಿಯಂತ್ರಣವನ್ನು ಮಾಡುವುದಕ್ಕೆ ಏನೇನು ಮಾಡಬೇಕು? ಪರೀಕ್ಷೆಗಳ ಸಾಮರ್ಥ್ಯ ಹೆಚ್ಚಿಗೆ ಹೇಗೆ ಮಾಡಬೇಕು? ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಏನೇನು ಔಷಧಿ, ಉಪಕರಣಗಳನ್ನು ಖರೀದಿಸಬೇಕೆಂದು ಇಂದಿನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಚೆರ್ಚೆ ನಡೆಸಲಾಗಿದೆ ಎಂದು ಇಂದು ವಿಧಾನ ಸೌಧದಲ್ಲಿ ನಡೆದ ಟಾಸ್ಕ್ ಪೋರ್ಸ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಲಕ್ಷ ರಾಪಿಡ್ ಆ್ಯಂಟಿಜೆನ್ ಟೆಸ್ಟಿಂಗ್ ಕಿಟ್ ಗಳನ್ನು ಖರೀದಿಸಲು, ರೋಗ ಲಕ್ಷಣಗಳಿಲ್ಲದವರ ಚಿಕಿತ್ಸೆಗಾಗಿ ರೆಮೆಡಿಸ್ ಸಿಬಿ ಎಂಬ ಔಷಧಿ ಖರೀದಿ ಒಪ್ಪಿಗೆ ನೀಡಲಾಗಿದೆ ಎಂದರು.
ರೋಗಿಗಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಔಷಧಿಗಳ ಕಿಟ್ ಗಳ ಖರೀದಿಗಾಗಿ ಆಯುಷ್ ಇಲಾಖೆಯಿಂದ ಪ್ರಸ್ತಾವನೆ ಬಂದಿತ್ತು. ಈ ಪ್ರಸ್ತಾವನೆಯನ್ನು ಉನ್ನತ ಮಟ್ಟದ ಸಮಿತಿಗೆ ನೀಡಲಾಗಿದೆ. ಮುಂದಿನ ವಾರ ಸಮಿತಿ ವರದಿ ನೀಡಲಿದೆ ಎಂದು ಅವರು ತಿಳಿಸಿದರು.
ಮೆಡಿಕಲ್ ಕಾಲೇಜುಗಳಲ್ಲಿ ಆರ್‌ಟಿಪಿಸಿಆರ್ ಟೆಸ್ಟಿಂಗ್ ಗಳನ್ನು ಮತ್ತಷ್ಟು ಹೆಚ್ಚಳ ಮಾಡುವ ಮೂಲಕ ಪರೀಕ್ಷೆ ಸಂಖ್ಯೆ ಹೆಚ್ಚಳ ಮಾಡುವುದು. ಕೋವಿಡೇತರ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲು ತೀರ್ಮಾನ ಮಾಡಲಾಗಿದೆ. ಅವರಿಂದ ಒಪಿಡಿ ದರ 10 ರೂ. ಕೂಡ ಪಡೆಯದಿರಲು ತೀರ್ಮಾನ ಮಾಡಲಾಗಿದೆ ಎಂದರು.