ದಿಲ್ಲಿ: ಕೊರೊನಾ ವೈರಸ್ ವಿರುದ್ಧ ನಡೆಸಿದ ಸಶಕ್ತ ಹೋರಾದ ಪರಿಣಾಮವಾಗಿ ದೇಶದಲ್ಲಿ ಸಾವಿನ ಪ್ರಮಾಣವು ಶೇ. 3.36ರಿಂದ ಶೇ. 2.43ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಮೂವತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ 19 ಪಾಸಿಟಿವ್ ಪ್ರಕರಣಗಳು ರಾಷ್ಟ್ರೀಯ ಸರಾಸರಿಗಿಂತ 8.07% ಕ್ಕಿಂತ ಕಡಿಮೆ ಹೊಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವಿಶೇಷ ಕರ್ತವ್ಯ ಅಧಿಕಾರಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
“19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 10 ಲಕ್ಷ ಜನಸಂಖ್ಯೆಗೆ ದಿನಕ್ಕೆ 140ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸುತ್ತಿವೆ.
ಭಾರತದಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಗೆ ಕೋವಿಡ್ ರೋಗಿಗಳ ಸಾವಿನ ಪ್ರಮಾಣ 20.4 ರಷ್ಟಿದೆ, ಇದು ವಿಶ್ವದ ಅತ್ಯಂತ ಕಡಿಮೆ ಪ್ರಮಾಣ ಎಂದು ಭೂಷಣ್ ಹೇಳಿದ್ದಾರೆ.