ಮುಂದಿನೆರಡು ತಿಂಗಳಲ್ಲಿ ಕೊರೊನಾ ಮಹಾಸ್ಫೋಟ

 

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಕೊರೊನಾ ವೈರಸ್ ಕಾಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹೆಚ್ಚಳವಾಗಲಿದೆ ಎಂದು ತಜ್ಞರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ರಾಜ್ಯದಲ್ಲಿ ಸದ್ಯ ಪತ್ತೆಯಾಗಿರುವ ಕೊರೊನಾ ವೈರಸ್ ಸೋಂಕು ಕೇವಲ ಆರಂಭ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಲಕ್ಷ ಲಕ್ಷ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದೆ. ಈಗಾಗಲೇ ಕೊರೊನಾ ಮಹಾಮಾರಿಗೆ 1,464 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.error: Content is protected !!
Scroll to Top