ಬೆಂಗಳೂರು : ಪಿಯುಸಿ ಉಪನ್ಯಾಸಕರ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಕೌನ್ಸಿಲಿಂಗ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಇದೀಗ ಗ್ರೀನ್ ಸಿಗ್ನಲ್ ನೀಡಿ ದಿನಾಂಕ ಘೋಷಣೆ ಮಾಡಿದೆ. ಆಗಸ್ಟ್ 10 ರಿಂದ ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
‘ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ದಿನಾಂಕ ನಿರ್ಧರಿಸುವ ಕುರಿತು ಇಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪದವಿಪೂರ್ವ ಮಂಡಳಿಯ ನಿರ್ದೇಶಕರ ಜೊತೆ ಸಭೆ ಸೇರಿ ಚರ್ಚಿಸಲಾಯಿತು. ದೀರ್ಘ ಸಮಾಲೋಚನೆ ನಂತರ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ನೇಮಕಾತಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಆ.10ರಂದು ಆರಂಭಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.