ಬೆಂಗಳೂರು : 2018ರಲ್ಲಿ ಕಡಿಮೆ ಸ್ಥಾನಗಳು ಬಂದಿದ್ದರೂ ಎಲ್ಲ ನಿರೀಕ್ಷೆಗಳನ್ನು ಹುಸಿ ಮಾಡಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿದ್ದವು. ಈ ಮೈತ್ರಿ ಸರ್ಕಾರ ಪತನವಾಗಿ ಜು. 23ಕ್ಕೆ ಒಂದು ವರ್ಷವಾಗಲಿದೆ.ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಗಿದು ಹೋದ ಕಥೆ, ಈ ಕುರಿತು ಮಾತನಾಡಿ ಏನೂ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪತ್ರ ಬರೆಯುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಹೇಳುವ ಮೂಲಕ ನೇರ ಟೀಕೆ ಮಾಡಿದ್ದರು. ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಮೈತ್ರಿ ಸರ್ಕಾರ ಪತನವಾಗಿದ್ದು, ಇಂದಿಗೆ ಮುಗಿದು ಹೋದ ಕಥೆ, ಇದನ್ನು ಕುಮಾರಸ್ವಾಮಿ ಮತ್ತೆ ಮತ್ತೆ ಏಕೆ ರೀಕಾಲ್ ಮಾಡಿಕೊಳ್ಳುತ್ತಾರೋ ಗೊತ್ತಿಲ್ಲ? ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದೆ. ಇದನ್ನು ಬಿಟ್ಟು ಕುಮಾರಸ್ವಾಮಿ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.