ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವತಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು ಈ ಸಂಬಂಧ ಪುರುಷರಕಟ್ಟೆಯ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ತಂದೆಯ ಜೊತೆ ದರ್ಬೆ ಸಮೀಪದ ಕ್ಲಿನಿಕ್‌ವೊಂದಕ್ಕೆ ಚಿಕಿತ್ಸೆಗೆಂದು ಬಂದ ವೇಳೆ ಕಣ್ಸನ್ನೆ ಮಾಡಿ ಮತ್ತು ಮೊಬೈಲ್ ನಂಬರನ್ನು ಚೀಟಿಯಲ್ಲಿ ಬರೆದು ಬಿಸಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಯುವತಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.