ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಜಯಕರ ಪೂಜಾರಿ ಹೆಬ್ರಿ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತ ಮೋರ್ಚಾದ ನೂತನ ಅಧ್ಯಕ್ಷರಾಗಿ ಜಯಕರ ಪೂಜಾರಿ ಹೆಬ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ ಇನ್ನಾ ಆಯ್ಕೆಯಾಗಿರುತ್ತಾರೆ.

೩ ಬಾರಿ ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ೧ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಜಯಕರ ಪೂಜಾರಿ ಅವರು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿ‍ರ್ವಹಿಸಿದ್ದ, ಈ ವೇಳೆ ಹೆಬ್ರಿ ಸಾಲುಮರದ ತಿಮ್ಮಕ್ಕ ಪಾರ್ಕ್‌ ನಿರ್ಮಾಣಗೊಂಡಿದೆ. ಹೆಬ್ರಿ ವಲಯ ಬಿಲ್ಲವ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿ‍ರ್ವಹಿಸುತ್ತಿರುವ ಇವರು ಹಲವಾರು ಸಾಮಾಜಿಕ, ಶೈಕ್ಷಣಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.



































































































































































error: Content is protected !!
Scroll to Top