ಕಾಸರಗೋಡು: ಕೇರಳದಲ್ಲಿ ಮತ್ತೊಮ್ಮು ಪೂರ್ತಿ ಲಾಕ್ ಡೌನ್ ಜಾರಿಗೆ ಬರಲಿದೆಯೇ? ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮು ರಾಜ್ಯವನ್ನು ಲಾಕ್ ಡೌನ್ ಮಾಡಬೇಕೆಂಬ ಬೇಡಿಕೆ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೋಮವಾರ ವಿಶೇಷ ಸಂಪುಟ ಸಭೆ ಕರೆದಿದೆ.ಬುಧವಾರ ಒ<ದೇ ದಿನ ರಾಜ್ಯದಲ್ಲಿ 1038 ಕೊರೊನಾ ಪೊಸಿಟಿವ್ ಪ್ರಕರಣಗಳು ವರದಿಯಾದ ಬಳಿಕ ಮ್ತೊಮ್ಮು ರಾಜ್ಯವನ್ನು ಲಾಕ್ ಡೌನ್ ಮಾಡಬೇಕೆಂಬ ಬೇಡಿಕೆ ಕೇಳಿ ಬಂದಿದೆ.
ಕೇರಳದ ಕೆಲವೆದೆ ಕೊರೊನಾ ವೈರಸ್ ಸಮುದಾಯ ಮಟ್ಟದಲ್ಲಿ ಹರಡಲು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಬೇಕಾಗಬಹುದು ಎಂದು ತಜ್ಷರು ಹೇಳಿದ್ದಾರೆ.