ಕಾರವಾರ: ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಖಲೀಸ್ಥಾನ ಉಗ್ರರಿಂದ ಬೆದರಿಕೆ ಬಂದಿದೆ. ಇತ್ತೀಚೆಗೆ ಅವರು ಮಾಡಿದ್ದ ಒಂದು ಟ್ವೀಟ್ ಇದಕ್ಕೆ ಕಾರಣ ಎನ್ನಲಾಗಿದೆ.
ಈ ಸಂಬಂಧ ನಿನ್ನೆ ಶಿರಸಿಯ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿರುವ ಅನಂತಕುಮಾರ ಹೆಗಡೆ ರಾಷ್ಟ್ರೀಯ ಏಕಾಗ್ರತೆ ಹಾಗೂ ಅಸ್ತಿತ್ವಕ್ಕೆ ಭಂಗ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಖಲೀಸ್ಥಾನ ಚಳುವಳಿಗಾರರನ್ನು ದೇಶದ್ರೋಹದ ಆರೋಪದ ಅಡಿಯಲ್ಲಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆ ಸಂಸದ ಹೆಗಡೆ ಟ್ವಿಟ್ಟರ್ ಮೂಲಕ ಖಲೀಸ್ಥಾನ ಚಳುವಳಿಗಾರರ ಚಟುವಟಿಕೆಗಳನ್ನು ಖಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಖಲೀಸ್ಥಾನಕ್ಕೆ ಸಂಬಂಧಪಟ್ಟವರು ಅವರನ್ನು ದೂರಾವಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರು. ಆದರೆ ಹೆಗಡೆ ಇದಕ್ಕೆ ಪ್ರತಿಕ್ರಿಯಿಸಿರಲಿಲ್ಲ.