ಭೋಪಾಲ್,ಜು.25 : ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೂ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಚೌಹಾಣ್ ಕೊರೊನಾ ವರದಿ ಪೊಸಿಟಿವ್ ಬಂದಿದೆ ಎಂದು ವರದಿಗಳು ತಿಳಿಸಿವೆ.
ಅಲ್ಲದೆ ಈ ಕುರಿತು ಸ್ವತಃ ಶಿವರಾಜ್ ಸಿಂಗ್ ಚೌಹಾಣ್ ಅವರೇ ತಮ್ಮ ಅ ಟ್ವಿಟರ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.
ಕೆಲ ದಿನಗಳಿಂದ ನನಗೆ ಕೊರೋನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗೊಳಗಾಗಿದ್ದೆ. ಇದೀಗ ವೈದ್ಯಕೀಯ ವರದಿ ಬಂದಿದ್ದು, ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ಹಾಗೂ ನಿಕಟ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್’ಗೆ ಒಳಗಾಗುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.
ಕೋವಿಡ್ 19 ಮಾರ್ಗಸೂಚಿಗಳನ್ನು ನಾನು ಅನುಸರಿಸುತ್ತಿದ್ದೇನೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್’ಗೊಳಗಾಗಿದ್ದೇನೆ. ರಾಜ್ಯದ ಕೊರೋನಾ ಪರಿಸ್ಥಿತಿ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ- ಸಭೆ ನಡೆಸುತ್ತೇನೆಂದಿದ್ದಾರೆ.