Tuesday, December 6, 2022
spot_img
Homeರಾಜ್ಯಬಕ್ರೀದ್‌ ಸಾಮೂಹಿಕ ಪ್ರಾರ್ಥನೆಗೆ ಅನುಮತಿಯಿಲ್ಲ

ಬಕ್ರೀದ್‌ ಸಾಮೂಹಿಕ ಪ್ರಾರ್ಥನೆಗೆ ಅನುಮತಿಯಿಲ್ಲ

-ಮಸೀದಿಗಳಲ್ಲಿ ಬ್ಯಾಚ್ ಗಳಲ್ಲಿ ಪ್ರಾರ್ಥನೆ

-ಗರಿಷೃ 50 ಮಂದಿಗೆ ಮಾತ್ರ ಅವಕಾಶ

ಬೆಂಗಳೂರು,ಜು.26 : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬಕ್ಕೆ ಹಬ್ಬಕ್ಕೆ ಸರಕಾರ ಕೆಲವೊಂದು ನಿರ್ಬಂಧಗಳನ್ನು ವಿಧಿಸಿದೆ. ಬಕ್ರೀದ್‌ನಂದು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅನುಮತಿ ನಿರಾಕರಿಸಲಾಗಿದೆ.

ರಾಜದಾಂದತ ಮುಸ್ಲಿಂರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ಆಗಸ್ಟ್ 1ರಂದು ಆಚರಿಸಲಾಗುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು ಆಚರಿಸಲಾಗುತ್ತಿದೆ.

ಬಕ್ರೀದ್ ಹಬ್ಬದ ದಿನ ಸಾಮಾನ್ಯವಾಗಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಪರಿಪಾಟ ಇದೆ. ಆದರೆ ಕೊರೋನಾ ಹಿನ್ನೆಲೆಯಲ್ಲಿ ಈದ್ಗಾ ಅಥವಾ ಬಯಲು ಪ್ರದೇಶದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಸೀದಿಗಳಲ್ಲಿ ಬ್ಯಾಚ್ ಪ್ರಕಾರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ್ದು, ಗರಿಷ್ಠ 50 ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಬಹುದು. ಅದೇ ರೀತಿ ಮಸೀದಿಗಳಲ್ಲಿ ಈದ್ ನಮಾಜ್ ಸಲ್ಲಿಸುವುದರಿಂದ ಯಾವುದೇ ಚ್ಯುತಿ ಬರುವುದಿಲ್ಲ ಎಂದು ಮುಸ್ಲಿಂ ಧಾರ್ಮಿಕ ಗುರುಗಳು ಸ್ಪಷ್ಟಪಡಿಸಿದ್ದಾರೆ.

ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ನಮಾಜ್ ಸಲ್ಲಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

Most Popular

error: Content is protected !!