ರಾಜ್ಯದಲ್ಲಿ 1 ಲಕ್ಷ ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು, ಜು. 27: ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಏರುತ್ತಲೇ ಇದ್ದು, ಸೋಂಕಿತರ ಸಂಖ್ಯೆ 1 ಲಕ್ಷ ಗಡಿಯತ್ತ ಸಾಗಿದೆ. ಭಾನುವಾರದವರೆಗೆ 96,141 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಗುಣಮುಖರಾದವರ ಒಟ್ಟು ಸಂಖ್ಯೆ 35,838 ಆಗಿದೆ. ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಅನ್ಯ ಕಾರಣದ ಸಾವು ಹೊರತುಪಡಿಸಿ 1878ಕ್ಕೆ ಏರಿದೆ. 

ಭಾನುವಾರ ಮೃತಪಟ್ಟ 82 ಮಂದಿ ಸೋಂಕಿತರ ಪೈಕಿ ಬೆಂಗಳೂರಿನಲ್ಲಿಯೇ 29 ಅಸುನೀಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 7, ಧಾರವಾಡ, ಕಲಬುರಗಿ ಮತ್ತು ಬೆಳಗಾವಿ ತಲಾ 6, ಮೈಸೂರು ಮತ್ತು ತುಮಕೂರು ತಲಾ 5, ಹಾಸನ ಮತ್ತು ದಾವಣಗೆರೆ ತಲಾ 3, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಗದಗ ಮತ್ತು ಬಾಗಲಕೋಟೆ ತಲಾ 2 ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದರಲ್ಲಿ ಏಳು ಪ್ರಕರಣಗಳಲ್ಲಿ ಸೋಂಕು ತಗುಲಿದ ಮೂಲ ಪತ್ತೆಯಾಗಿಲ್ಲ.error: Content is protected !!
Scroll to Top