ದ.ಕ.ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್‌ ದಿಢೀರ್‌ ವರ್ಗಾವಣೆ

ಮಂಗಳೂರು, ಜು. 28: ಹಠಾತ್‌ ಬೆಳವಣಿಗೆಯೊಂದರಲ್ಲಿ   ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.  ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಒ. ಆಗಿದ್ದ ಡಾ. ರಾಜೇಂದ್ರ ಕೆ.ವಿ. ಅವರನ್ನು ನೇಮಕಗೊಳಿಸಲಾಗಿದೆ.

ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಾ. ರಾಜೇಂದ್ರ ಕೆ.ವಿ ಅವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ  ಕರ್ತವ್ಯ ನಿರ್ವಹಿಸಿದ್ದರು.

ದಕ್ಷ ಅಧಿಕಾರಿಯಾಗಿದ್ದ ಮತ್ತು ಕೊರೊನಾ ಹಾವಳಿ ನಿಯಂತ್ರಣಕ್ಕಾಗಿ  ಶಕ್ತಿ ಮೀರಿ ದುಡಿದಿದ್ದ ಸಿಂಧು ಅವರನ್ನು ಯಾವ ಕಾರಣಕ್ಕಾಗಿ  ವರ್ಗಾಯಿಸಲಾಗಿದೆ ಎಂಬುದರ ಕುರಿತು ನಾನಾ ರೀತಿಯ ಊಹಾಪೋಹಗಳು ಹರಡಿವೆ. ಸಿಂಧು ಬಿ. ರೂಪೇಶ್‌‌ಗೆ   ಗೋ ಸಾಗಾಟಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಮುಳುವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

error: Content is protected !!
Scroll to Top