ದಿಲ್ಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15 ಲಕ್ಷದ ಗಡಿ ದಾಟಿದ್ದು, ಜಗತ್ತಿನಲ್ಲಿ ಎರಡನೇ ಸ್ಥಾನಕ್ಕೆ ಜಿಗಿಯುವತ್ತ ನಾಗಾಲೋಟದಲ್ಲಿದೆ.
ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲಿದ್ದು , ಒಂದೇ ದಿನ 47,704 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ನಿನ್ನೆ ಒಂದೇ ದಿನ 768 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 34,193ಕ್ಕೆ ತಲುಪಿದೆ.
ಒಟ್ಟು ಸೋಂಕಿತರ ಪೈಕಿ 9,88,030 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 5,09,447 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.