ಬಿಜೆಪಿ ವಕ್ತಾರರಾಗಿ ಕ್ಯಾ. ಗಣೇಶ್‌ ಕಾರ್ಣಿಕ್‌

ಬೆಂಗಳೂರು: ರಾಜ್ಯ ಬಿಜೆಪಿ ವಕ್ತಾರರಾಗಿ ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್‌ ಆಯ್ಕೆಯಾಗಿರುತ್ತಾರೆ. ಜು. 31ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 10 ಮಂದಿ ಉಪಾಧ್ಯಕ್ಷರು, 4 ಮಂದಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿಲಾಗಿದೆ. ನೂತನ ವಕ್ತಾರರಾಗಿ ನೇಮಕಗೊಂಡ ಕ್ಯಾ. ಗಣೇಶ್‌ ಕಾರ್ಣಿಕ್‌ ಅವರು ಕಾರ್ಕಳ ತಾಲೂಕಿನ ಕೆರ್ವಾಶೆಯವರು.

error: Content is protected !!
Scroll to Top