ಕೊರೊನಾ ಹಗರಣ : ನ್ಯಾಯಾಂಗ ತನಿಖೆಗೆ ರಮಾನಾಥ ರೈ ಒತ್ತಾಯ

ಮಂಗಳೂರು, ಆ. 1:  ಕೊರೊನಾ ಕಿಟ್‌ಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ರಮಾನಾಥ  ರೈ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದುಪ್ಪಟ್ಟು ಹಣ ಕೊಟ್ಟು ಆರೋಗ್ಯ ಉಪಕರಣಗಳನ್ನು ಖರೀದಿಸಲಾಗಿದೆ. ಇದರ ಬಗ್ಗೆ ಧ್ವನಿ ಎತ್ತಿದ ಬಳಿಕ ಸಚಿವರುಗಳು ದ್ವಂದ್ವ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರದ ಬಗ್ಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿದೆ. ಕೇಂದ್ರದಲ್ಲಿರುವುದು ಒಂದು ಮೊಂಡ ಹಾಗೂ ಭಂಡ ಸರ್ಕಾರ. ಅದು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತದೆ. ಇವರಿಗೆ ಜನತೆಯ ಹಿತ ಬೇಕಾಗಿಲ್ಲ, ಬದಲಾಗಿ ಭಾವನಾತ್ಮಕವಾಗಿ ಜನರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

ಆತಳಿತ ವ್ಯವಸ್ಥೆಯ ಮೇಲೆ ಜನತೆಗೆ ಅಪನಂಬಿಕೆ  ಬರಬಾರದು. ಆದ್ದರಿಂದ‌ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಬೇಕು. ಸತ್ಯ-ಅಸತ್ಯಗಳು ರಾಜ್ಯದ ಜನತೆಗೆ ಗೊತ್ತಾಗಬೇಕು. ಒಂದು ವೇಳೆ ತನಿಖೆಗೆ ವಹಿಸದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರೈ ಎಚ್ಚರಿಕೆ ನೀಡಿದ್ದಾರೆ.‌

error: Content is protected !!
Scroll to Top