
ಮಂಗಳೂರು, ಆ. 2: ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ಇಂದು ಮಧಾಹ್ನ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಕಲಾವಿದರು ಪವಾಡಸದೃಶವಾಗಿ ಪಾರಾಗಿದ್ದಾರೆ.
ತುಳು ಚಲನಚಿತ್ರ ಹಾಸ್ಯ ನಟರಾದ ಸುಂದರ ರೈ ಮಂದಾರ ಮತ್ತು ಚಂದ್ರಹಾಸ ಅನಂತಾಡಿ ಅವರು ಕಾರಿನಲ್ಲಿ ಮಂಗಳೂರಿನಿಂದ ಮಾಣಿಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿಯಾದ ಮಳೆ ಸುರಿಯುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆಯೇ ಅಥವಾ ಕಾರಿನ ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡಿದೆಯೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ವಿಟ್ಲ ಪೊಲೀಸರು ತನಿಖೆ ಮಾಡುತ್ತಿದ್ದಾರೆ.