ಕಾರ್ಕಳ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ಹಾಗೂ ಫೇಸ್ಬುಕ್ ಪುಟಗಳಲ್ಲಿ ಮುಖ್ಯಮಂತ್ರಿಯವರು ಸ್ಪಷ್ಟ ಪಡಿಸಿದ್ದಾರೆ.
‘ನನ್ನ ಕೋವಿಡ್ 19 ಪರೀಕ್ಷಾ ವರದಿಯು ಪಾಸಿಟಿವ್ ಎಂದು ಬಂದಿದೆ. ಈ ಸೋಂಕಿಗೆ ಸಂಬಂಧಿಸಿದ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ’ ಎಂದು ಅವರು ತಮ್ಮ ಟ್ವಿಟ್ಟರ್ ಸಂದೇಶದಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರಿಗೂ ಕೊರೊನಾ ಪಾಸಿಟಿವ್
