ದೇಶದಲ್ಲಿ 18 ಲಕ್ಷ ಕೊರೊನಾ  ಸೋಂಕಿತರು

ದಿಲ್ಲಿ, ಆ. 3:  ದೇಶದಲ್ಲಿ ಕಳೆದ 24 ತಾಸುಗಳಲ್ಲಿ ಹೊಸದಾಗಿ 52,972 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.

ಭಾನುವಾರ  ಒಂದೇ ದಿನ 771 ಮಂದಿ ವೈರಸ್ ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೆ ಸಾವನ್ನಪ್ಪಿದವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.

ಒಂದೇ ದಿನ 52,972 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696 ಕ್ಕೆ ಏರಿಕೆಯಾಗಿದೆ. 18,03,696 ಮಂದಿ ಸೋಂಕಿತರ ಪೈಕಿ 1,186,203 ಮಂದಿ ಗುಣಮುಖರಾಗಿದ್ದು, 5,79,357 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

error: Content is protected !!
Scroll to Top