ಶಾ ಬಗ್ಗೆ ಅಕ್ಷೇಪಾರ್ಹ ಟ್ವೀಟ್‌ : ಕಾಂಗ್ರೆಸ್‌ ನಾಯಕ ಬಂಧನ

ಬೆಂಗಳೂರು, ಆ.3 : ಕೊರೊನಾ ವೈರಸ್ ಸೋಂಕು ತಗಲಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್‌ ಮಾಡಿದ  ಕೆಪಿಸಿಸಿಯ ಸೋಷಿಯಲ್ ಮೀಡಿಯಾದ ಕಾರ್ಯದರ್ಶಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ. ಕೆಆರ್ ಪುರಂನಲ್ಲಿರುವ ಅವರ ನಿವಾಸದಲ್ಲಿ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.

ಟ್ವಿಟ್ಟರ್​ನಲ್ಲಿ ಆರ್.ಜೆ. ನವೀದ್ ಎಂಬುವರು ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರು ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕಿದ್ದರು. ಈ ಸಂಬಂಧ ಆನಂದ್ ಪ್ರಸಾದ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿತ್ತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಭಾನುವಾರ ದೃಢಪಟ್ಟಿದೆ. ಅವರನ್ನು ದೆಹಲಿಯ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.error: Content is protected !!
Scroll to Top