ಯಡಿಯೂರಪ್ಪ ಪುತ್ರಿಗೂ ಕೊರೊನಾ ಸೋಂಕು

ಬೆಂಗಳೂರು, ಆ.3: ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪೊಸಿಟಿವ್‌ ಆದ  ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ಪೊಸಿಟಿವ್ ಬಂದಿದೆ ಎಂದು ವರದಿಯಾಗಿದೆ.

ನಿನ್ನೆಯಷ್ಟೇ ಯಡಿಯೂರಪ್ಪ ಅವರಲ್ಲಿ ಕೊರೋನಾ ಪೊಸಿಟಿವ್ ಬಂದಿತ್ತು. ಇದೀಗ ಅವರ ಪುತ್ರಿಯಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿ ವಾರವೂ ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅವರಿಗೆ ಪೊಸಿಟಿವ್ ವರದಿ ಬಂದಿದೆ.

 error: Content is protected !!
Scroll to Top