ಬೆಂಗಳೂರು : ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.ಅವರು ಸೋಮವಾರ ರಾತ್ರಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವಿಚಾರವನ್ನು ಟ್ವಿಟರ್ ಮೂಲಕ ತಿಳಿಸಿರುವ ಸಿದ್ದರಾಮಯ್ಯ ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಮೂತ್ರ ಕೋಶದ ಸೋಂಕಿನಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು ಅದರಲ್ಲಿ ಕೊರೊನಾ ಇರೋದು ದೃಢವಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಆತಂಕಪಡುವ ಕಾರಣ ಇಲ್ಲ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ. ಮೂಲಗಳು ಹೇಳಿವೆ