ಎಸ್.ಪಿ.ಬಾಲಸುಬ್ರಹ್ಮಣ್ಯಂಗೆ ಕೊರೊನಾ ಸೋಂಕು

ಚೆನ್ನೈ, ಆ. 5 : ಖ್ಯಾತ ಗಾಯಕ ಎಸ್.ಬಿ.ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ಸೋಂಕು ತಗಲಿದೆ. ಅವರನ್ನು ಚೆನ್ನೈನ ಚುಲೈಮೇಡು ಎಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಅವರು ತಾನು ಕೊರೊನಾ ಸೋಂಕಿಗೆ ತುತ್ತಾಗಿರುವುದನ್ನು ತಿಳಿಸಿದ್ದಾರೆ.ಅವರು ಕಳೆದ ಎರಡು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ಅವರಿಗೆ ಕರೋನ ನಿರ್ಧಾರಣ ಪರೀಕ್ಷೆ ವೇಳೆ ಕರೋನ ಪಾಸಿಟಿವ್ ಕಂಡುಬಂದಿದೆ.
ಕೊರೊನಾ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾನ್ಯರಿಂದ ಹಿಡಿದು ಗಣ್ಯ ವ್ಯಕ್ತಿಗಳವರೆಗೂ ಎಲ್ಲರನ್ನೂ ಕೊರೊನಾ ಕಾಡುತ್ತಿದೆ. ಸೆಲೆಬ್ರಿಟಿಗಳು ಸೇರಿದಂತೆ ಸಿನಿಮಾ ನಟರು, ರಾಜಕೀಯ ಗಣ್ಯರು ಹೀಗೆ ಇತ್ತೀಚಿನ ದಿನಗಳಲ್ಲಿ ಅನೇಕ ಗಣ್ಯರು ಕೊರೊನಾದಿಂದ ಬಳಲುತ್ತಿದ್ದಾರೆ.

error: Content is protected !!
Scroll to Top