ಬೈಕ್‌ ಢಿಕ್ಕಿಯಿಂದ ಗಾಯಗೊಂಡಿದ್ದ ಪಾದಚಾರಿ ಸಾವು

ಕಾರ್ಕಳ: ಜು. 18ರಂದು ಬಜಗೋಳಿ ಪೆಟ್ರೋಲ್‌ ಬಂಕ್‌ ಬಳಿ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಪಾದಚಾರಿ ಹುಂಡಿಗ (70) ಆ. 4ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಜು. 18ರ ಸಂಜೆ ಬಜಗೋಳಿ ಪೆಟ್ರೋಲ್ ಬಂಕ್ ಬಳಿ‌ ಮಣ್ಣು ರಸ್ತೆಯಲ್ಲಿ ನಿಂತುಕೊಂಡಿರುವಾಗ ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಸಾಗುತ್ತಿದ್ದ ಬೈಕ್‌ ಸವಾರ (KA-20-EV-0276) ಎಡಭಾಗಕ್ಕೆ ಚಲಾಯಿಸಿಕೊಂಡು ಬಂದು ಮಣ್ಣು ರಸ್ತೆಯಲ್ಲಿ ನಿಂತಿದ್ದ ಹುಂಡಿಗ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಅವರಿಗೆ ಕಣ್ಣು, ಕಾಲು, ಕೈಗೆ ತೀವ್ರ ಥರದ ಗಾಯವಾಗಿದ್ದು, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

error: Content is protected !!
Scroll to Top