ಅಹಮದಾಬಾದ್, ಆ. 6: ಅಹಮದಾಬಾದ್ನ ನವರಂಗಪುರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಚಿಕಿತ್ಸೆ ದಾಖಲಾಗಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿದ್ದ 35 ಮಂದಿ ರೋಗಿಗಳನ್ನು ಸ್ಥಳಾಂತರಿಸಲಾಗಿದೆ
ಆಸ್ಪತ್ರೆಯ ಇಂಟೆನ್ಸಿವ್ ಕೇರ್ ಯುನಿಟ್ (ಐಸಿಯು)ವಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಗಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಅದಾಗ್ಯೂ 8 ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಎಂಬ ಹೆಸರಿನ ಈ ಆಸ್ಪತ್ರೆಯನ್ನು ಕೊರೊನಾ ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು. ಅಗ್ನಿ ದುರಂತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ,
ತನಿಖೆಗೆ ಆದೇಶ
ಈ ನಡುವೆ ದುರ್ಘಟನೆಗೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರು ತನಿಖೆಗೆ ಆದೇಶಿಸಿದ್ದಾರೆ.
ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಂಗೀತಾ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದು, ಮೂರು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.