ಕಾಪು ಪೇಟೆ ಮಧ್ಯಾಹ್ನ ನಂತರ ಬಂದ್‌

ಕಾಪು, ಆ.6 : ಪುರಸಭೆ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಆ. 7 ರಿಂದ ಆ. 14ರವರೆಗೆ ಮಧ್ಯಾಹ್ನ 1 ಗಂಟೆಯವರೆಗೆ ವ್ಯಾಪಾರ ನಡೆಸಲು ಕಾಪು ಪೇಟೆಯ ವರ್ತಕರು ನಿರ್ಧರಿಸಿದ್ದಾರೆ.

ಕಾಪು ಮಾರ್ಕೆಟ್ ವ್ಯಾಪ್ತಿಯ ಇಬ್ಬರು ವರ್ತಕರು ಕೋವಿಡ್-19 ಸೋಂಕಿಗೆ ಬಲಿಯಾಗಿದ್ದು, ಪುರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಹಲವು ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಗ್ರಾಹಕರ ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ವರ್ತಕರು ಮತ್ತು ಪುರಸಭಾ ಸದಸ್ಯರ ಮನವಿಯ ಮೇರೆಗೆ ಎಲ್ಲ  ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕಾಪು ಮಾರ್ಕೆಟ್ ನಲ್ಲಿ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಬುಧವಾರ ಮಾರ್ಕೆಟ್ ನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದು, ಇಂದು ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಲಾಗಿತ್ತು.

 

error: Content is protected !!
Scroll to Top