ದಿಲ್ಲಿ, ಆ. 6: ಅಹ್ಮದಾಬಾದ್ ನ ಕೊರೊನಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ತಲಾ 2 ಲ.ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಟ್ವಿಟರ್ ನಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ, ಘಟನೆ ಕುರಿತು ಮುಖ್ಯಮಂತ್ರಿಗಳು ಹಾಗೂ ಮೇಯರ್ ಜೊತೆಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಘಟನೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ಅಗತ್ಯ ಸಹಾಯಗಳನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅಲ್ಲದೆ, ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ 2 ಲ. ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.