ಉಡುಪಿಯ ಮೀನು ಬಲೆ ಫ್ಯಾಕ್ಟರಿಯ 50 ಕಾರ್ಮಿಕರಿಗೆ ಕೊರೊನಾ

ಉಡುಪಿ, ಆ. 7 : ನಗರದ ನಿಟ್ಟೂರಿನಲ್ಲಿರುವ  ಮೀನು ಬಲೆ ತಯಾರಿಕೆ ಫ್ಯಾಕ್ಟರಿಯ 50ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಎರಡು ದಿನ ಫ್ಯಾಕ್ಟರಿಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ.ಕೊರೊನಾ ಪ್ರಕರಣಗಳು ದೃಢಪಟ್ಟ ಬಳಿಕ ಉದ್ಯೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದ ನೂರಾರು ಕಾರ್ಮಿಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಫ್ಯಾಕ್ಟರಿಯಲ್ಲಿ ನಾಲ್ಕು ಯುನಿಟ್‌ಗಳಿದ್ದು, ಒಂದು ಸಾವಿರಕ್ಕೂ ಹೆಚ್ಚೂ ಕಾರ್ಮಿಕರು ದುಡಿಯುತ್ತಿದ್ದಾರೆ. ಹಿರಿಯ ಆರೋಗ್ಯ ಅಧಿಕಾರಿಗಳು ಫ್ಯಾಕ್ಟರಿಗೆ ಬೇಟಿ ನೀಡಿ ಪರಿಶೀಲಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ  ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನೂರಾರು ಕಾರ್ಮಿಕರು ಕೆಲಸ ಮಾಡುವಲ್ಲಿ ಸರಕಾರಿ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಇಂತಹ ಸ್ಥಳಗಳಿಗೆ ಬೇಟಿ ನೀಡಿ ಪರಿಶೀಲಿಸ ಬೇಕೆಂದು  ಕಾರ್ಮಿಕರು ಆಗ್ರಹಿಸಿದ್ದಾರೆ.

 

error: Content is protected !!
Scroll to Top