ಧರ್ಮಸ್ಥಳ, ಆ. 7: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.
ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ಪ್ರವಾಹ ಏರಿದೆ. ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ಇದೆ. ಈ ಕುರಿತು ಮೆನ್ನೆಚ್ಚರಿಕೆ ವಹಿಸಲಾಗಿದ್ದು, ಸ್ನಾನ ಘಟ್ಟದ ಬಳಿ ಯಾರನ್ನೂ ಬಿಡಲಾಗುತ್ತಿಲಲ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.